Saturday, April 19, 2025
Google search engine

Homeರಾಜ್ಯಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ- ಸಚಿವ ಎಂಬಿ ಪಾಟೀಲ್

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ- ಸಚಿವ ಎಂಬಿ ಪಾಟೀಲ್

ಬೆಂಗಳೂರು: ಬಹುಕಾಲದಿಂದಲೂ ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾಗಿರುವ ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾರ್ಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಿಳಿಸಿದರು.

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತರಲು ಅದಕ್ಕಾಗಿ ಉದ್ಯಮ ಪರಿಣಿತರಿಂದ ಸಲಹೆಗಳನ್ನು ಮುಕ್ತವಾಗಿ ಆಹ್ವಾನಿಸಲಾಗಿದೆ. ಸ್ಥಳಿಯ ನಿರ್ಮಿತ ಈ ಉತ್ಪನ್ನವನ್ನು ಮಾರುಕಟ್ಟೆಗಳಲ್ಲಿ ಮತ್ತೆ ಬುಟಿದೇಳುವಂತೆ ಮಾಡಲು ಆಸಕ್ತರು karnatakavision2030@gmail.comಗೆ ತಮ್ಮ ಸಲಹೆಗಳನ್ನು ಕಳಿಸಬಹುದು ಎಂದು ಅವರು ಹೇಳಿದರು.

ಈ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿದ್ದ ಸಚಿವ ಎಂ.ಬಿ.ಪಾಟೀಲ್ ಅವರು, ಮೈಸೂರು ಸ್ಯಾಂಡಲ್‌ ಸೋಪ್‌, ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‍‌ ಅವರು ಆರಂಭಿಸಿದ ಉತ್ಪನ್ನವಾಗಿದೆ. ಅದು ರಾಜ್ಯದ ಮಕುಟಮಣಿಯ ಅನರ್ಘ್ಯ ರತ್ನವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ ಆಶಯಕ್ಕೆ ತಕ್ಕಂತೆ ಈ ಹೆಜ್ಜೆ ಇಡಲು ಸರ್ಕಾರ ತೀರ್ಮಾನಿಸಿದೆ. ತಜ್ಞರು, ಉದ್ಯಮಿಗಳು ಈ ನಿಟ್ಟಿನಲ್ಲಿ ಸೂಕ್ತ ಸಲಹೆಗಳನ್ನು ಕೊಟ್ಟು, ಸರ್ಕಾರದ ಪ್ರಯತ್ನಕ್ಕೆ ಕೈಗೂಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಉತ್ಕೃಷ್ಟ ಉತ್ಪನ್ನದ ಬಳಕೆಯಲ್ಲಿ ಸೋತಿದ್ದೇವೆ

ಮೈಸೂರು ಸ್ಯಾಂಡಲ್‌ ಸೋಪ್‌ ರಾಜ್ಯದ ಸಾಬೂನು ಮಾರುಕಟ್ಟೆಯಲ್ಲೂ ಸಿಂಹಪಾಲು ಹೊಂದಿಲ್ಲ. ಹಾಗೆಯೇ, ಈ ಬ್ರ್ಯಾಂಡ್‌ ಉತ್ಪನ್ನವು ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗಿದೆ. ಮಾರುಕಟ್ಟೆಯಲ್ಲಿ ಉಳಿದ ಹೆಸರಿನ ಸಾಬೂನುಗಳು ಅತ್ಯಧಿಕ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಜೊತೆಗೆ ಒಟ್ಟು ವಹಿವಾಟಿನಲ್ಲಿ ಶೇಕಡ 3ರಷ್ಟು ಮಾತ್ರ ರಫ್ತು ವಹಿವಾಟಿನ ಮೂಲಕ ಬರುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಸ್ಪರ್ಧಾತ್ಮಕ ಮಾರುಕಟ್ಟೆಯ ಯುಗವಾಗಿದೆ. ನಮ್ಮ ಬಳಿ ಮೈಸೂರು ಸ್ಯಾಂಡಲ್‌ ಸೋಪ್‌ನಂತಹ ಉತ್ಕೃಷ್ಟ ಉತ್ಪನ್ನವಿದ್ದೂ ನಾವು ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸೋತಿದ್ದೇವೆ. ಈ ನಿರಾಶಾದಾಯಕ ಪರಿಸ್ಥಿತಿಯನ್ನು ನಿವಾರಿಸಲು ಕರ್ನಾಟಕ ರಾಜ್ಯ ಸರ್ಕಾರ ಉತ್ಸುಕವಾಗಿದೆ.

ಒಟ್ಟಿನಲ್ಲಿ ರಾಜ್ಯದ ಈ ಹೆಮ್ಮೆಯ ಉತ್ಪನ್ನಕ್ಕೆ ಮರುಜೀವ ತುಂಬಿ, ಮಾರುಕಟ್ಟೆಯನ್ನು ಸೃಷ್ಟಿಸಲು ಹಲವು ಉಪಕ್ರಮಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular