Saturday, April 19, 2025
Google search engine

Homeಅಪರಾಧಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್

ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್

ಮಂಗಳೂರು(ದಕ್ಷಿಣ ಕನ್ನಡ): ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇಂದು ಮಂಗಳೂರಲ್ಲಿ ನಡೆದಿದೆ.

ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್  ರೊನಾಲ್ಡ್ ಲೋಬೋ, ಬಂಧಿತರು. ದೂರುದಾರರಾದ ಪ್ರಭಾಕರ ನಾಯ್ಕರವರು ಲೋಕೋಪಯೋಗಿ ಇಲಾಖೆಯಲ್ಲಿ ಕ್ಲಾಸ್-2 ದರ್ಜೆಯ ಗುತ್ತಿಗೆದಾರರಾಗಿದ್ದಾರೆ. ಲೋಕೋಪಯೋಗಿ ಇಲಾಖೆಯ ಅಡಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಮೀಸಲಿರಿಸಿದ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಮಲಂಪಯ್ಯ ಪರಿಶಿಷ್ಟ ಪಂಗಡದ ಕಾಲೋನಿಯ ಎಎನ್‌ ಎಂ ರಸ್ತೆ ಕಾಮಗಾರಿಯನ್ನು  25 ಲಕ್ಷ ಮೊತ್ತ ಹಾಗೂ ಬೆಳ್ತಂಗಡಿ ತಾಲೂಕು ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಮಗಾರಿಯ 20 ಲಕ್ಷ ಮೊತ್ತದ ಟೆಂಡರ್ ಪ್ರಕ್ರಿಯೆಯಲ್ಲಿ ಬಿಡ್ ಸಲ್ಲಿಸಿ ಆಯ್ಕೆಯಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿದ್ದರು.

ಈ ಕಾಮಗಾರಿ ಮುಗಿದ ಬಳಿಕ ಸೈಟ್‌ನ ಮೆಟೀರಿಯಲ್ ಪರಿಶೀಲನೆ ಮಾಡಿ ವರದಿ ನೀಡಲು ಮಂಗಳೂರು ಲೋಕೋಪಯೋಗಿ ಇಲಾಖೆಯ ಗುಣ ಮತ್ತು ಭರವಸೆ ವಿಭಾಗಕ್ಕೆ ದೂರುದಾರರ ಕಡತವು ಬಂದಿದ್ದು, ಹೀಗಾಗಿ ಇವರು ಇಲಾಖೆಯ ವಿಭಾಗಕ್ಕೆ ಹೋಗಿ ಕಿರಿಯ ಇಂಜಿನಿಯರ್-2, ರೊನಾಲ್ಡ್ ಲೋಬೋ ಎಂಬುವವರಲ್ಲಿ ಮಾತನಾಡಿದಾಗ ಅವರು ಫೈಲ್ ಬಂದಿರುವುದಾಗಿ ತಿಳಿಸಿದ್ದು, ಅಮೌಂಟ್ ಕೊಟ್ಟು ಹೋಗಿ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

 ದೂರುದಾರರಿಗೆ ಲಂಚದ ಹಣ ಕೊಟ್ಟು ಕೆಲಸ ಮಾಡಲು ಇಷ್ಟ ಇಲ್ಲದೇ ಇದ್ದುದ್ದರಿಂದ ವಾಪಾಸ್ಸು ಬಂದಿದ್ದಾರೆ. ದಿನಾಂಕ 16.10.2023 ರಂದು ಮಂಗಳೂರು ಬೊಂದೆಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆಯ ಗುಣ ಮತ್ತು ಭರವಸೆ ವಿಭಾಗದ ಕಛೇರಿಗೆ ಹೋಗಿ ಅಲ್ಲಿನ ಕಿರಿಯ ಇಂಜಿನಿಯರ್-2, ರೊನಾಲ್ಡ್ ಲೋಬೋರವರಲ್ಲಿ ಮಾತನಾಡಿದ್ದು, ದೂರುದಾರರ ಕಡತದಲ್ಲಿ ನಮೂದಿಸಿದಂತೆ ಮೆಟೀರಿಯಲ್ ಪರಿಶೀಲನೆ ಮಾಡಿ ವರದಿ ನೀಡಲು 22,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಸ್ವಲ್ಪ ಕಮ್ಮಿ ಮಾಡಿ ಎಂದು ಹೇಳಿದಾಗ 20,000/- ಕೊಡಿ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಇಂದು ಮಂಗಳೂರು ಬೊಂದೆಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆಯ ಗುಣ ಮತ್ತು ಭರವಸೆ ವಿಭಾಗದ ಕಿರಿಯ ಇಂಜಿನಿಯರ್ ರೊನಾಲ್ಡ್ ಲೋಬೋರವರು ವಿದ್ಯಾದುದಾರರಿಂದ 20,000 ಲಂಚದ ಹಣವನ್ನು ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಬಂಧಿಸಲಾಗಿದೆ. ಆರೋಪಿತರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

 ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕ  ಸಿ.ಎ. ಸೈಮನ್ ರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯ ಪೊಲೀಸ್‌ ಉಪಾಧೀಕ್ಷಕಿ ಕಲಾವತಿ.ಕೆ,  ಚಲುವರಾಜು, ಬಿ, ಹಾಗೂ ಪೊಲೀಸ್‌ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್.ಪಿ ಇವರು ಸಿಬ್ಬಂದಿ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಮಾಡಿದರು.

RELATED ARTICLES
- Advertisment -
Google search engine

Most Popular