Wednesday, April 23, 2025
Google search engine

Homeರಾಜ್ಯವಿದೇಶದಿಂದ ಗಾಂಜಾ ತರಿಸಿ ಮಂಗಳೂರಿನಲ್ಲಿ ಸೇಲ್ : ಆರೋಪಿ ಬಂಧನ

ವಿದೇಶದಿಂದ ಗಾಂಜಾ ತರಿಸಿ ಮಂಗಳೂರಿನಲ್ಲಿ ಸೇಲ್ : ಆರೋಪಿ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ದಸ್ತಗಿರಿ ಮಾಡಿ ಆತನ ವಶದಿಂದ 30 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾ ಹಾಗೂ 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು ನಗರಕ್ಕೆ ವಿದೇಶದಿಂದ ಲಕ್ಷಾಂತರ ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾವನ್ನು ಸಾಗಾಟ ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಕುದ್ರೋಳಿ ಪರಿಸರದಲ್ಲಿ ಅಕ್ರಮವಾದ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ.


ಹೆಚ್. ಮೊಹಮ್ಮದ್ ಹಫೀಜ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ ರೂ.75,000/- ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ ರೂ. 30,85,500/- ಆಗಬಹುದು. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೈಡ್ರೋವೀಡ್ ಗಾಂಜಾವನ್ನು ವಿದೇಶದ ಥೈಲ್ಯಾಂಡ್ ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುತ್ತದೆ. ಈ ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು.


ಈ ಮಾದಕ ವಸ್ತು ಹೈಡ್ರೋವೀಡ್ ಮಾರಾಟ/ಸಾಗಾಟದ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರು( ಕಾನೂನು & ಸುವ್ಯವಸ್ಥೆ ವಿಭಾಗ) ರವರಾದ ಶ್ರೀ ಸಿದ್ದಾರ್ಥ ಗೋಯಲ್, IPS ಮತ್ತು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ ವಿಭಾಗ) ರವರಾದ ಶ್ರೀ ಬಿ ಪಿ ದಿನೇಶ್ ಕುಮಾರ್, KSPS ರವರ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular