ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ಪ್ರಕರಣ ಸಂಬಂಧ ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು. ಬಳಿಕ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಹಿರಿಯ ರಾಜಕಾರಣಿ ಆಗಿ ಖಂಡನೀಯ ಕೃತ್ಯ ನಡೆಸಬಾರದು ಇತರರಿಗೆ ಮಾದರಿಯಾಗಿರಬೇಕು ಎಂದು ಅಭಿಪ್ರಾಯಪಟ್ಟಿತು, ಬಳಿಕ ವಿಚಾರಣೆಯನ್ನು ಮುಂದೂಡಿದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭವಾದಾಗ ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ ಷರತ್ತು ಸಡಿಲಿಕೆಗೆ ಮನವಿ ಮಾಡಿದರು. ಹಿರಿಯ ರಾಜಕಾರಣಿ ಆಗಿರುವುದರಿಂದ ದೆಹಲಿಗೆ ತೆರಳಬೇಕಿದೆ.ಅಲ್ಲದೆ ರಾಜಕೀಯ ಪಕ್ಷದ ಸಂಸದೀಯ ಸಮಿತಿ ಸದಸ್ಯರಾಗಿದ್ದಾರೆ. ಹೀಗಾಗಿ ಷರತ್ತು ಸಡಿಲಿಸಲು ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು.
ಹಿರಿಯ ರಾಜಕಾರಣಿಯಾಗಿ ಖಂಡನೀಯ ಕೃತ್ಯ ನಡೆಸಬಾರದು. ಇತರರಿಗೆ ಮಾದರಿಯಾಗುವಂತಹ ನಡವಳಿಕೆ ಇರಬೇಕು ಎಂದು ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು. ಈ ಆರೋಪ ಸುಳ್ಳೇಂಬ ಕಾರಣಕ್ಕೆ ವಿಚಾರಣೆಗೆ ತಡೆ ನೀಡಲಾಗಿದೆ ಎಂದು ಹೈಕೋರ್ಟಿಗೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಪ್ರತಿಕ್ರಿಯೆ ನೀಡಿದರು. ಆಕ್ಷೇಪಣೆ ಸಲ್ಲಿಸಲು SPP ಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಹೈಕೋರ್ಟ್ ಪೀಠ ಮುಂದೂಡಿತು.