Friday, April 4, 2025
Google search engine

Homeರಾಜ್ಯಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ; ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ:...

ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ; ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ: ಸಿಎಂ

ಬೆಂಗಳೂರು: ಬಾಬು ಸಾಬ್ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು ಅಮಾನತು ಮಾಡಿದರೆ ಸಾಲದು. ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್ ಅವರಿಗೂ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚಿಸಿದರು.

ಕಾರ್ಮಿಕ ಇಲಾಖೆಯಿಂದ ತಲಾ ₹ 3 ಲಕ್ಷ, ಬಿಬಿಎಂಪಿಯಿಂದ ತಲಾ ₹ 2 ಲಕ್ಷ ಪರಿಹಾರವನ್ನು ಮೃತರ ಕುಟುಂಬಕ್ಕೆ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸಂಪೂರ್ಣವಾಗಿ ಇಲಾಖೆಗಳಿಂದಲೇ ಭರಿಸಲಾಗುವುದು ಎಂದರು.

RELATED ARTICLES
- Advertisment -
Google search engine

Most Popular