Saturday, April 19, 2025
Google search engine

HomeUncategorizedರಾಷ್ಟ್ರೀಯಉತ್ತರ ಪ್ರದೇಶದಲ್ಲಿ ಕಟ್ಟಡ ಕುಸಿತ: ಇಬ್ಬರು ಸಾವು, 17 ಮಂದಿಗೆ ಗಾಯ

ಉತ್ತರ ಪ್ರದೇಶದಲ್ಲಿ ಕಟ್ಟಡ ಕುಸಿತ: ಇಬ್ಬರು ಸಾವು, 17 ಮಂದಿಗೆ ಗಾಯ

ಉತ್ತರ ಪ್ರದೇಶ: ಮುಜಾಫರ್‌ ನಗರದಲ್ಲಿ ಭಾನುವಾರ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ.

ಪೊಲೀಸರು ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 19 ಕಾರ್ಮಿಕರನ್ನು ಹೊರತೆಗೆದಿದ್ದು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಗಾಯಗೊಂಡಿರುವ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ಪ್ರಕಾರ, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾರುಕಟ್ಟೆ ಮಾಲೀಕ ಹಾಗೂ ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯನ್ನು ಗಮನಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಅವರು ಅಧಿಕಾರಿಗಳು ಮತ್ತು ರಕ್ಷಣಾ ತಂಡಕ್ಕೆ ಸೂಚನೆ ನೀಡಿದ್ದಾರೆ. ಇದಲ್ಲದೇ ವೈದ್ಯರ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು.

RELATED ARTICLES
- Advertisment -
Google search engine

Most Popular