ಮೈಸೂರು: ಕಾಡುಪ್ರಾಣಿಗಳ ಬೇಟೆಗೆ ಇಟ್ಟಿದ್ದ ಸಿಡಿಮದ್ದು ತಿಂದು ಎತ್ತಿನ ಬಾಯಿ ಛಿದ್ರ ಛಿದ್ರವಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಈರೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಗಂಭೀರ ಗಾಯಗಳಾಗಿ ಎತ್ತು ಸ್ಥಳದಲ್ಲೇ ಮೃತಪಟ್ಟಿದೆ.
ಗ್ರಾಮದ ಮಹದೇವಯ್ಯ ಎಂಬುವರ ಜಮೀನಿನಲ್ಲಿ ಕಾಡು ಪ್ರಾಣಿಗಳ ಬೇಟೆಗಾಗಿ ಪೇಪರ್‌ನಲ್ಲಿ ಸುತ್ತಿ ಇಟ್ಟಿದ್ದ ಸಿಡಿಮದ್ದು ತಿಂದಿದ್ದರಿಂದ ಎತ್ತು ಮೃತಪಟ್ಟಿದ್ದೆ. ಕಾಡು ಹಂದಿ ಸೇರಿದಂತೆ ವಿವಿಧ ಪ್ರಾಣಿಗಳ ಹಿಡಿಯಲು ಸಿಡಿಮದ್ದು ಇಡಲಾಗಿತ್ತು. ತಿನ್ನುವ ಪದಾರ್ಥ ಇರಬಹುದೆಂದು ಎತ್ತು ಬಾಯಿ ಹಾಕಿದಾಗ ಸಿಡಿಮದ್ದು ಸಿಡಿದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದು, ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.