Saturday, April 19, 2025
Google search engine

Homeರಾಜ್ಯಮೀನುಗಾರ ಮಹಿಳೆಯರಿಗೆ ಬಂಪರ್‌ ಕೊಡುಗೆ: 3ಲಕ್ಷ ರೂ ಬಡ್ಡಿರಹಿತ ಸಾಲ

ಮೀನುಗಾರ ಮಹಿಳೆಯರಿಗೆ ಬಂಪರ್‌ ಕೊಡುಗೆ: 3ಲಕ್ಷ ರೂ ಬಡ್ಡಿರಹಿತ ಸಾಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸರ್ಕಾರದ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳ ಜಾರಿ ಜೊತೆಗೆ ಇತರ ವಲಯಕ್ಕೂ ಸರ್ಕಾರ ಕೊಡುಗೆ ನೀಡಿದೆ. ಸಿಎಂ ಸಿದ್ದರಾಮಯ್ಯ 14ನೇ ಬಾರಿ ಬಜೆಟ್ ಮಂಡನೆ ಮಾಡಿದ್ದು, 2023-24ನೇ ಸಾಲಿನ ಬಜೆಟ್ ಗಾತ್ರ 3,27,747 ಕೋಟಿ ರೂಪಾಯಿ ಎಂದು ಸರ್ಕಾರ ತಿಳಿಸಿದೆ.

2023-24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಕರಾವಳಿ ಜನರ ಜೀವನಾಧಾರ ಕಸುಬು ಮೀನುಗಾರಿಕಾ ವಲಯಕ್ಕೆ ನೀಡಿರುವ ಕೊಡುಗೆಗಳ ವಿವರ ಇಲ್ಲಿದೆ.

1. ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.

2.ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ.

3. ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು.

4. ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ವಿಪುಲ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು.

5. ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು.

6. ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು 2023-24ನೇ ರಾಜ್ಯ ಸಾಲಿನ ಬಜೆಟ್‌ನಲ್ಲಿ ತಿಳಿಸಲಾಗಿದೆ.

RELATED ARTICLES
- Advertisment -
Google search engine

Most Popular