ಪಾಂಡವಪುರ : ಫಿನಾಯಿಲ್ ಮತ್ತಿತರ ವಸ್ತುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಆಟೋಗೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಹೊಡೆದು ಮೂವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎಲೆಕೆರೆ ಹ್ಯಾಂಡ್‌ಪೋಸ್ಟ್ ವೃತ್ತದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಪಾಂಡವಪುರ ಮಾರ್ಗವಾಗಿ ಕೆಆರ್‌ಎಸ್ ಕಡೆ ಹೊರಟಿದ್ದ ಆಟೋಗೆ ಹುಬ್ಬಳ್ಳಿಕಡೆಯಿಂದ ಮೈಸೂರಿಗೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿ ಹೊಡೆದು ಮುಂಭಾಗ ಸಂಪೂರ್ಣವಾಗಿ ಜಖಂ ಗೊಂಡಿದೆ. ಆಟೋ ದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಫಿನಾಯಿಲ್ ಮತ್ತಿತರ ವಸ್ತುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗಾಯಾಳುಗಳನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ರೀರಂಗಪಟ್ಟಣ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲಿಸಿದ್ದಾರೆ.
ಎಲೆಕೆರೆ ಹ್ಯಾಂಡ್‌ಪೋಸ್ಟ್‌ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ವೃತ್ತದ ಸಮೀಪದಲ್ಲಿ ಹಂಪ್ಸ್ ಇಲ್ಲದ ಕಾರಣ ವಾಹನಗಳು ವೇಗವಾಗಿ ಬಂದು ಅಪಘಾತಗಳು ನಡೆಯುತ್ತಿವೆ. ಕೂಡಲೇ ಇಲ್ಲಿ ಹಂಪ್ಸ್ ನಿರ್ಮಿಸಬೇಕೆಂದು ಸ್ಥಳೀಯ ನಿವಾಸಿ ಡಾಮಡಹಳ್ಳಿ ಮಧು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಎಲೆಕೆರೆ ಹ್ಯಾಂಡ್‌ಪೋಸ್ಟ್‌ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ವೃತ್ತದ ಸಮೀಪದಲ್ಲಿ ಹಂಪ್ಸ್ ಇಲ್ಲದ ಕಾರಣ ವಾಹನಗಳು ವೇಗವಾಗಿ ಬಂದು ಅಪಘಾತಗಳು ನಡೆಯುತ್ತಿವೆ. ಕೂಡಲೇ ಇಲ್ಲಿ ಹಂಪ್ಸ್ ನಿರ್ಮಿಸಬೇಕೆಂದು ಸ್ಥಳೀಯ ನಿವಾಸಿ ಡಾಮಡಹಳ್ಳಿ ಮಧು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.