Thursday, April 3, 2025
Google search engine

Homeರಾಜ್ಯಸುದ್ದಿಜಾಲಬಸ್ ಚಾಲಕನಿಗೆ ಹೃದಯಾಘಾತ: ಪಾದಚಾರಿ ಮಹಿಳೆಗೆ ಡಿಕ್ಕಿ: ಇಬ್ಬರು ಸಾವು

ಬಸ್ ಚಾಲಕನಿಗೆ ಹೃದಯಾಘಾತ: ಪಾದಚಾರಿ ಮಹಿಳೆಗೆ ಡಿಕ್ಕಿ: ಇಬ್ಬರು ಸಾವು

ಮೈಸೂರು: ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದ್ದು, ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ನಡೆದಿದೆ.

ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್, ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆಎಸ್ ಆರ್ ಟಿಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದ್ದು ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಣೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ. ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ.

ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆರಂಭದಲ್ಲಿ ಚಾಲಕನಿಗೆ ಹೃದಯಾಘಾತವಾದ ವಿಷಯ ತಿಳಿಯದೆ ಚಾಲಕನ ಮೇಲೆ ಗ್ರಾಮಸ್ಥರು ಮುಗಿಬಿದ್ದರು. ಇನ್ನು ಎರಡು ಮೃತದೇಹಗಳನ್ನು ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದ್ದಾರೆ. ಈ ಕುರಿತು ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular