Friday, April 11, 2025
Google search engine

Homeಅಪರಾಧಪ್ರಪಾತಕ್ಕೆ ಉರುಳಿದ ಬಸ್: ಮಹಿಳೆ ಸಾವು

ಪ್ರಪಾತಕ್ಕೆ ಉರುಳಿದ ಬಸ್: ಮಹಿಳೆ ಸಾವು

ಚಿಕ್ಕಮಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೇಬೈಲು ಕ್ರಾಸ್ ಬಳಿ ಇಂದು ಮುಂಜಾವ ಸಂಭವಿಸಿದೆ.

ಮೃತರನ್ನು ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(೪೫) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ ೪೮ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಇಂದು ಬೆಳಗಿನ ಜಾವ ೪:೪೫ರ ವೇಳೆ ಗೋಣಿಬೀಡ ಪೊಲೀಸ್ ಠಾಣಾ ವ್ಯಾಪ್ತಿಯ ಚೀಕನಹಳ್ಳಿ – ಕಸ್ಕೇಬೈಲು ಕ್ರಾಸ್ ಬಳಿ ಬಸ್ ತಲುಪಿದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular