Thursday, June 12, 2025
Google search engine

Homeಅಪರಾಧಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್​: 8 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್​: 8 ಮಂದಿ ಸಾವು

ನೇಪಾಳ: ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 15ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಕಠ್ಮಂಡುವಿನಿಂದ ಬೇನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಕಠ್ಮಂಡುವಿನಿಂದ ರಮಣೀಯ ನಗರವಾದ ಪೊಖರಾಗೆ ತೆರಳುತ್ತಿದ್ದ ಬಸ್ಸು ಪ್ರಾಂತದ ಧಾಡಿಂಗ್ ಜಿಲ್ಲೆಯ ಚಾಲೀಸ್‌ನಲ್ಲಿ ತ್ರಿಶೂಲಿ ನದಿಗೆ ಬಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಬಸ್ ತ್ರಿಶೂಲಿ ನದಿಯಲ್ಲಿ ಭಾಗಶಃ ಮುಳುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೆಯೇ ಅನೇಕ ಪ್ರಯಾಣಿಕರನ್ನು ಬಸ್​ನಿಂದ ಜೀವಂತವಾಗಿ ಹೊರತೆಗೆಯಲಾಯಿತು. ಮುಂಗಾರಿನಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚುತ್ತಿತ್ತು.

RELATED ARTICLES
- Advertisment -
Google search engine

Most Popular