ಚಾಮರಾಜನಗರ : ಮಲೇ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆದು ಮೈಸೂರಿಗೆ ವಾಪಸ್ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬೈಪಾಸ್ ಬಳಿ ಟೈರ್ ಸ್ಫೋಟಗೊಂಡು ಪಲ್ಟಿಯಾಗಿದೆ. ದುರ್ಘಟನೆಯಲ್ಲಿ 10 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ಹುಣ್ಣಿಮೆ ಹಿನ್ನೆಲೆ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು.



