ಚನ್ನಪಟ್ಟಣ: ತಾಲೂಕಿನ ಇತಿಹಾಸ ಪ್ರಸಿದ್ದ ಬೇವೂರು ಶ್ರೀ ಬೆಟ್ಟದ ತಿಮ್ಮಪ್ಪ ಸ್ವಾಮಿ ದೇವಸ್ಥಾನದಲ್ಲಿ ಮೊದಲ ಶ್ರಾವಣ ಶನಿವಾರದ ಪ್ರಯುಕ್ತ ದೇವರಿಗೆ ವಿಶೇಷವಾಗಿ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಶ್ರಾವಣ ಮಾಸದ ಶನಿವಾರಗಳಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಮೊದಲ ಶ್ರಾವಣ ಶನಿವಾರದ ಪ್ರಯುಕ್ತ ತಿಮ್ಮಪ್ಪಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಿ ಪೂಜಾ ಕೈಂಕರ್ಯ ಮಾಡಲಾಯಿತು. ಜೊತೆಗೆ ದೇವರನ್ನು ಶೇಷ ವಾಹನದಲ್ಲಿ ದೇವಸ್ಥಾನದಲ್ಲಿ ಉತ್ಸವ ಮಾಡಲಾಯಿತು.
ಸಂದರ್ಭದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವರ ಅಲಂಕಾರ ಮತ್ತು ಉತ್ಸವವನ್ನು ಕಣ್ತುಂಬಿಕೊಂಡರು. ಮುಂಜಾನೆಯಿಂದ ಸಂಜೆವರೆಗೆ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.