Monday, April 7, 2025
Google search engine

HomeUncategorizedರಾಷ್ಟ್ರೀಯಉಪಚುನಾವಣೆ ದಿನಾಂಕ ಪ್ರಕಟ : ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ

ಉಪಚುನಾವಣೆ ದಿನಾಂಕ ಪ್ರಕಟ : ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ

ನವದೆಹಲಿ: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ.

ಈ ಬಗ್ಗೆ ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. ಇದು ಪ್ರಿಯಾಂಕಾ ಗಾಂಧಿ ಅವರ ಮೊದಲ ಚುನಾವಣೆಯಾಗಿದೆ. ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಣ್ಣಕ್ಕಿಳಿದರೆ, ಇನ್ನುಳಿದಂತೆ ಪಾಲಕ್ಕಾಡ್​ ವಿಧಾನಸಭಾ ಕ್ಷೇತ್ರದಿಂದ ರಾಹುಲ್ ಮಾಂಕೂಟತ್ತಿಲ್ ಹಾಗೂ ಚೆಲ್ಲಕ್ಕಾರ ಮೀಸಲು ಕ್ಷೇತ್ರಕ್ಕೆ ರಮ್ಯಾ ಹರಿದಾಸ ಅವರನ್ನು ಕಣಕ್ಕಿಳಿಸಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಯನಾಡ್‌ ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು, ಎರಡೂ ಕ್ಷೇತ್ರದಲ್ಲಿ ಗೆದ್ದಿದ್ದರು. ಆದ್ರೆ, ತಮ್ಮ ಕುಟುಂಬದ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ರಾಯ್‌ಬರೇಲಿಯನ್ನು ಉಳಿಸಿಕೊಳ್ಳಲು ರಾಹುಲ್ ಗಾಂಧೀ ಅವರು ವಯನಾಡು ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಈಗ ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ ಮಾಡಲಿದ್ದಾರೆ.

RELATED ARTICLES
- Advertisment -
Google search engine

Most Popular