ಬೆಂಗಳೂರು: ಲೋಕಸಭೆಗೆ ಆಯ್ಕೆಯಾದ ಎಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಇ. ತುಕಾರಾಂ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ದಾರಿಯಾಗಿದೆ.
ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಶನಿವಾರ ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಇ. ತುಕಾರಾಂ ಅವರು ವಿಧಾನಸಭಾಧ್ಯಕ್ಷರ ಅನುಮತಿ ಮೇರೆಗೆ ಕಾರ್ಯದರ್ಶಿಗೆ ಶುಕ್ರವಾರವೇ ರಾಜೀನಾಮೆ ಪತ್ರ ಸಲ್ಲಿಸಿದ್ದರು.
ಮೂವರ ರಾಜೀನಾಮೆಯನ್ನು ಸಭಾಧ್ಯಕ್ಷರು ಅಂಗೀಕರಿಸಿದ ಬೆನ್ನಲ್ಲೇ, ವಿಧಾನಸಭೆಯ ಮೂರು ಸ್ಥಾನಗಳು ಖಾಲಿಯಾಗಿವೆ ಎಂದು ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ. ಈ ಅಧಿಸೂಚನೆಯನ್ನು ಚುನಾವಣೆ ಆಯೋಗಕ್ಕೆ ಕಳುಹಿಸಲಾಗಿದೆ. ಆಯೋಗವು ಆರು ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸಬೇಕಿದೆ.