Friday, April 11, 2025
Google search engine

Homeರಾಜ್ಯರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ನಾಳೆ ಮತದಾನ ಆರಂಭ

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ನಾಳೆ ಮತದಾನ ಆರಂಭ

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಾಳೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶವಿದೆ.

ಹಾಗಾಗಿ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯು ರಾಜ್ಯ ನಾಯಕರಿಗೂ ಪ್ರತಿಷ್ಠೆಯ ಚುನಾವಣೆಯಾಗಿದ್ದು, ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಗೆಲ್ಲಲು ಮೂರು ರಾಜಕೀಯ ಪಕ್ಷಗಳು ಹರಸಾಹಸ ಪಡುತ್ತಿವೆ. ಈಗಾಗಲೇ ಎಲ್ಲಾ ಪಕ್ಷಗಳ ನಾಯಕರು ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಮೂರೂ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸ್ಪರ್ಧಿಸುತ್ತಿದ್ದಾರೆ. ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದಾರೆ.

ಇನ್ನು ಸಂಡೂರು ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವೈಯಕ್ತಿಕ ಪ್ರತಿಷ್ಠೆ ಇದೆ. ಸಂಡೂರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ತುಕರಾಂ ಪತ್ನಿ ಅಖಾಡಲ್ಲಿದ್ದಾರೆ. ಹಾಗಾಗಿ ಅವರನ್ನು ಗೆಲ್ಲಿಸುವುದು ಅನಿವಾರ್ಯವಾಗಿದೆ. ಅಲ್ಲದೆ, ಶಿಗ್ಗಾಂವಿಯಲ್ಲೂ ಜಮೀರ್‌ ಆಪ್ತ ಯಾಸೀರ್ ಖಾನ್ ಪಠಾಣ್ ಸ್ಪರ್ಧೆ ಮಾಡಿರುವುದರಿಂದ ಈ ಕ್ಷೇತ್ರವನ್ನೂ ಸಿದ್ದರಾಮಯ್ಯ ವೈಯಕ್ತಿಕ ಪ್ರತಿಷ್ಠೆಯ ಕ್ಷೇತ್ರವಾಗಿ ಮಾಡಿಕೊಂಡಿದ್ದಾರೆ.

ಮೂರು ಕ್ಷೇತ್ರಗಳ ಉಪ ಚುನಾವಣೆ ಕಾಂಗ್ರೆಸ್ ಇಬ್ಬರು ನಾಯಕರ ಪ್ರತಿಷ್ಠೆಯ ಪ್ರಶ್ನೆಯೂ ಹೌದಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಡಿಕೆ ಶಿವಕುಮಾರ್‌ಗೆ ಅನಿವಾರ್ಯವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಡಿಕೆ ಸುರೇಶ್ ಸೋಲಿನ ಸೇಡು ತೀರಿಸಿಕೊಳ್ಳಲು ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಚನ್ನಪಟ್ಟಣ ಕ್ಷೇತ್ರವನ್ನು ವೈಯಕ್ತಿಕ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular