ರಾಜ್ಯದಲ್ಲಿ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬುಧವಾರ ಆರಂಭವಾಗಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.