ಕೆ.ಆರ್.ನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಿತ್ರ ಪೌಂಡೇಷನ್ ಅಧ್ಯಕ್ಷರು ಆದ ಸಮಾಜ ಸೇವಕ ಬೂಕನಕೆರೆ ವಿಜಯರಾಮೇಗೌಡ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಅವಕಾಶ ಕಲ್ಪಿಸಬೇಕೆಂದು ಕೆ.ಆರ್.ನಗರ ತಾಲೂಕು ಒಕ್ಕಲಿಗ ವೇದಿಕೆ ಅಧ್ಯಕ್ಷ ಸಿ.ಜೆ.ಪಾಲಾಕ್ಷ ಒತ್ತಾಯಿಸಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣಾ ಸಭಾ ಚುನಾವಣೆಯಲ್ಲಿ ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಅವರಿಗೆ ಸ್ಪರ್ದೆ ಮಾಡಲು ಪಕ್ಷದಿಂದ ಬಿ ಫಾರಂ ನೀಡಿರಲಿಲ್ಲ ಆದ್ದರಿಂದ ಈ ಬಾರಿ ಅವಕಾಶ ನೀಡಬೇಕೆಂದು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಮತ್ತು ವಿಜಯ ರಾಮೇಗೌಡ ಅವರ ಬೆಂಬಲಿಗರು ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ-ಮುಖ್ಯಮಂತ್ರಿ ಡಿ.ಕೆ.. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಮತ್ತು ಪಕ್ಷದ ಮುಖಂಡರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ತಮ್ಮ ಸಮಾಜಮುಖಿ ಕೆಲಸಗಳ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದಾದ್ಯಂತ ಅತ್ಯಂತ ಜನನರಾಗಿಯಾಗಿರುವ ವಿಜಯ ರಾಮೇಗೌಡ ಅವರಿಗೆ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಿದರೆ ಅವರ ಗೆಲುವು ಖಚಿತ ಎಂದು ಸಿ.ಜೆ. ಪಾಲಾಕ್ಷ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಇವರ ಸ್ಪರ್ಧೆಗೆ ಅವಕಾಶ ಕಲ್ಪಿಸಿ ಹಸಿರು ನಿಶಾನೆ ತೋರ ಲಿದೆ ಎಂಬ ಭರವಸೆ ವ್ಯಕ್ತಪಡಿಸಿರುವ ತಾಲೂಕು ಒಕ್ಕಲಿಗ ವೇದಿಕೆ ಅಧ್ಯಕ್ಷರು ಇವರ ಗೆಲುವಿಗೆ ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆಂದು ಎಂದು ಹೇಳಿದ್ದಾರೆ.