Wednesday, April 9, 2025
Google search engine

Homeಸ್ಥಳೀಯಆರ್.ಡಿ.ಪಿ.ಆರ್ ಪ.ಜಾತಿ, ಪ.ಪಂಗಡ ಅಧಿಕಾರಿಗಳು ಹಾಗೂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಸಿ.ಪ್ರಕಾಶ್ ಆಯ್ಕೆ

ಆರ್.ಡಿ.ಪಿ.ಆರ್ ಪ.ಜಾತಿ, ಪ.ಪಂಗಡ ಅಧಿಕಾರಿಗಳು ಹಾಗೂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಸಿ.ಪ್ರಕಾಶ್ ಆಯ್ಕೆ

ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಧಿಕಾರಿಗಳು ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮೈಸೂರು ಜಿಲ್ಲಾ ನೂತನ ಅಧ್ಯಕ್ಷರಾಗಿ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿ ಪಿಡಿಒ ಸಿ.ಪ್ರಕಾಶ್ ಅವರು ಅವಿರೋಧವಾಗಿ ಆಯ್ಕೆಯಾದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ರಾಜ್ಯ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಗಳವಾರ ಮೈಸೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಘಟಕಕ್ಕೆ 2024-25 ರಿಂದ 2027-28ನೇ ಸಾಲಿಗೆ ಚುನಾವಣೆ ಜರುಗಿತು.

ಗೌರವ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಅವರು, ಉಪಾಧ್ಯಕ್ಷರಾಗಿ ಕೆ.ಎಸ್.ಲಿಂಗರಾಜು ಅವರು, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಮಹದೇವು, ಖಜಾಂಚಿಯಾಗಿ ಮಹದೇವನಾಯಕ, ಸಹ ಕಾರ್ಯದರ್ಶಿಯಾಗಿ ಗಣೇಶ್, ಸಂಟಘಟನಾ ಕಾರ್ಯದರ್ಶಿಯಾಗಿ ಟಿ.ಎ.ಮಹದೇವ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ಕುಮಾರನಾಯ್ಕ, ಆಂತರಿಕಾ ಲೆಕ್ಕ ಪರಿಶೋಧಕರಾಗಿ ತಾರ, ರಾಜ್ಯ ಪರಿಷತ್ ಸದಸ್ಯರಾಗಿ ಎನ್.ಇ.ಚಂದ್ರಕಾಂತ್ ಅವರು ಕೂಡಾ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಡಾ.ಎಸ್.ಸುರೇಶ್ ಅವರು ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಪಿ.ಡಿ.ಒ ಸಂಘದ ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸ್ ಹಾಗೂ ರಾಮಣ್ಣ, ಗಿರಿಧರ್, ಕವಿತಾ, ರಾಮದಾಸ್, ಮಂಜುಳಾ, ಮಹದೇವಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪಿ.ಡಿ.ಒ ಅವರು, ಕಾರ್ಯದರ್ಶಿಗಳು, ಎಸ್‌ಡಿಎಎ, ಡಿ.ಇ.ಒ ಗಳು, ಬಿಲ್ ಕಲೆಕ್ಟರ್‌ಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular