ಯಳಂದೂರು: ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಮುಂದಿನ ದಿನಗಳಲ್ಲಿ ರಾಜಯ ಸಚಿವ ಸಂಪುಟದ ಸಭೆಯನ್ನು ಹಮ್ಮಿಕೊಳ್ಳಲು ಮನವಿ ಮಾಡಲಾಗುವುದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.
ಅವರು ಸೋಮವಾರ ರಾತ್ರಿ ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇಗುಲದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಅಭಿನಂದಿಸಿ ಮಾತನಾಡಿದರು. ಈ ಹಿಂದೆ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಇಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಈಗ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇಲ್ಲೂ ಕೂಡ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗುವುದು. ದೇಗುಲದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲು, ಇಲ್ಲಿ ಸುಸಜ್ಜಿತ ದಾಸೋಹ ಭವನ ನಿರ್ಮಿಸಲು ಕ್ರಮ ವಹಿಸಲಾಗುವುದು. ಇಲ್ಲದೆ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಇಲ್ಲಿ ನಮ್ಮ ತಂದೆ ಬಿ. ರಾಚಯ್ಯ ರವರ ಕಾಲದಲ್ಲಿ ನೀಡಿದ್ದ ಜಮೀನುಗಳ ಬಗ್ಗೆ ಅರಣ್ಯ ಹಾಗೂ ಕಂದಾಯ ಇಲಾಖೆಯಲ್ಲಿರುವ ಗೊಂದಲಗಳ ನಿವಾರಣೆಗೆ ಇಲ್ಲಿ ಸಂಪುಟ ಸಭೆ ನಡೆದರೆ ಪರಿಹಾರ ಲಭಿಸಲಿದೆ.
ಈಗಾಗಲೇ ಬೆಟ್ಟ, ಯಳಂದೂರು ಹಾಗೂ ಸಂತೆಮರಹಳ್ಳಿಯಲ್ಲಿ ಸುಸಜ್ಜಿತ ಬಸ್ ಕೆಸ್ಸಾರ್ಟಿಸಿ ಬಸ್ ನಿಲ್ದಾಣದ ನಿರ್ಮಿಸಲು ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇದರೊಂದಿಗೆ ದೇವಸ್ಥಾನವನ್ನು ಇನ್ನೂ ಅಭಿವೃದ್ದಿ ಮಾಡುವ ಯೋಚನೆ ಇದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಗೆ ನೇಮಕವಾದ ಗುಂಬಳ್ಳಿ ರಾಜಣ್ಣ, ಜೆ. ಶ್ರೀನಿವಾಸ್, ಕೇತಮ್ಮ, ಸ್ಪೂರ್ತಿ, ವೆಂಕಟರಾಮು, ಸಿದ್ದರಾಜು, ಎಂ. ಸುರೇಶ್, ವಿ. ನಾರಾಯಣಸ್ವಾಮಿರನ್ನು ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಉಪಾಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್, ಚೇತನ್ ದೊರೆರಾಜ್, ರಾಘವೇಂದ್ರ, ನಂಜುಂಡಸ್ವಾಮಿ, ಶಿವು, ವಿಶ್ವ, ವೆಂಕಟೇಶ್ ಸೇರಿದಂತೆ ಅನೇಕರು ಇದ್ದರು.