ಮೈಸೂರು: ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ೩೭ನೆಯ ಪುಣ್ಯಾರಾಧನೆಯನ್ನು ನಾಳೆ ಡಿ. ೧೭ ಭಾನುವಾರದಂದು ಶ್ರೀ ಸುತ್ತೂರು ಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.
ನಾಳೆ ಡಿ. ೧೭ ಬೆಳಗ್ಗೆ ೯.೦೦ ಗಂಟೆಗೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ, ಮಠಾಧೀಶರುಗಳ ಸಮ್ಮುಖದಲ್ಲಿ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ನೆರವೇರುವ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಶ್ರೀ ಸುತ್ತೂರು ಮಠ ಹಾಗೂ ಜೆಎಸ್‌ಎಸ್ ಮಹಾ ವಿದ್ಯಾಪೀಠದ ೨೦೨೪ನೇ ಇಸವಿಯ ಕನ್ನಡ ಮತ್ತು ಇಂಗ್ಲಿಷ್ ಗೋಡೆ ಕ್ಯಾಲೆಂಡರ್‌ಗಳು ಹಾಗೂ ಪಾಕೆಟ್ ಕ್ಯಾಲೆಂಡರ್‌ಗಳನ್ನು ಬಿಡುಗಡೆಗೊಳಿಸಲಾಗುವುದು.