Friday, April 11, 2025
Google search engine

Homeರಾಜಕೀಯಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ: ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆ

ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ: ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು.

ಅಧಿಕಾರಕ್ಕೇ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?

ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!!

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕಿಡಿಕಾರಿದರು.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ತಾಕೀತುಮಾಡಿದರು.

RELATED ARTICLES
- Advertisment -
Google search engine

Most Popular