ಗುಂಡ್ಲುಪೇಟೆ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೈಕ್ ಸವಾರ ಹಂಗಳ ಗ್ರಾಮದ ರಾಜಪ್ಪ (35) ಗಾಯಾಳು. ಊಟಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಇನ್ನೂ ಮಾಹಿತಿ ಅರಿತ ಗುಂಡ್ಲುಪೇಟೆ ಠಾಣೆ ಪೆÇಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳುವಿಗೆ ಎಡಗೈ ಮೂಳೆ ಮುರಿದು ತಲೆಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.
ಇನ್ನೂ ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆ ಪೆÇಲೀಸರು ಎರಡು ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.