ಗುಂಡ್ಲುಪೇಟೆ: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಟ್ಟಣದ ಕೆಪಿಟಿ ಹೋಟೆಲ್ ಮುಂಭಾಗ ನಡೆದಿದೆ.
ಪಟ್ಟಣದ ನಿವಾಸಿ ಬೈಕ್ ಮ್ಯಾಕಾನಿಕ್ ಅಶ್ವಥ್ ಗಾಯಾಳು. ಕಾರು ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರನ ಕಾಲು ಹಾಗೂ ತಲೆಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ. ಇನ್ನೂ ಘಟನೆ ಮಾಹಿತಿ ಅರಿತ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕಳುಹಿಸಲಾಗಿದೆ.
ಇನ್ನು ಎರಡು ವಾಹನವನ್ನು ವಶಕ್ಕೆ ಪಡೆದ ಗುಂಡ್ಲುಪೇಟೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.