ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಚುಂಚಘಟ್ಟ ನಿವಾಸಿ ಮಂಜುನಾಥ್(52) ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಇನ್ನು ಮಂಜುನಾಥ್ ಪತ್ನಿ ಹೇಮಲತಾ, ಮಗಳು ಕೃತಿಕಾ(20), ಮಗ ಪ್ರಜ್ವಲ್(14)ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೈಸ್ ರಸ್ತೆಯಲ್ಲಿ ತೆರಳುವಾಗ ಲಾರಿಯ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮಂಜುನಾಥ್ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ..
ಅಪಘಾತ ಬಳಿಕ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.