ಮೈಸೂರು : ಮೈಸೂರಿನಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ೫ ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗೆ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ತಾಯಿ ಮಗು ಹಾರಿ ಬಿದ್ದಿದ್ದಾರೆ. ೫ ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಲಿಖಿತ್ ಮೃತ ಬಾಲಕ. ಮಗುವಿನ ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ವೇಳೆ ಮಗುವಿನ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.