ಗುಂಡ್ಲುಪೇಟೆ: ರಸ್ತೆಯಲ್ಲಿ ತೆರಳುತ್ತಿದ್ದ ಬೈಸಿಕಲ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕಗ್ಗಳದಹುಂಡಿ ರಾಷ್ಟ್ರೀಯ ಹೆದ್ದಾರಿ-೭೬೬ರಲ್ಲಿ ಬಳಿ ನಡೆದಿದೆ. ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದ ನಾಗೇಂದ್ರ(೨೭) ನೃತ ಯುವಕ. ಈತ ಕಗ್ಗಳದಹುಂಡಿಯಿಂದ ಸೈಕಲ್ ನಲ್ಲಿ ಮಧ್ಯಾಹ್ನದ ಊಟ ತೆಗೆದುಕೊಂಡು ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಇನೋವಾ ಕಾರು ಸೈಕಲ್ ಸವಾರನಿಗೆ ಗುದ್ದಿದೆ. ಘಟನೆಯಲ್ಲಿ ತಲೆಗೆ ತೀವ್ರಪೆಟ್ಟಾದ ಹಿನ್ನೆಲೆ ಆತ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಮಾಹಿತಿ ಅರಿತ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಇನೋವಾ ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದು, ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂ ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.