ಮಂಡ್ಯ: ನಾಲೆಗೆ ಕಾರು ಉರುಳಿ ನಾಲ್ವರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯ ಮಿಮ್ಸ್ ಶವಾಗಾರಕ್ಕೆ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದಿದ್ದಾರೆ.

ಸಚಿವರ ಜೊತೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಜರಿದ್ದರು.
ಮೃತರ ಅಂತಿಮ ದರ್ಶನ ಪಡೆದ ಸಚಿವರು ಮೃತರ ಸಂಬಂಧಿಕರಿಗೆ ಸಾಂತ್ವಾನ ಹೇಳಿದ್ದಾರೆ.
ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.