ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾದ್ಸ್ ನಂತರ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ಸಮೀಪದ ಸಂಪಾಜೆ ಗೇಟಿನ ಬಳಿ ನಡೆದಿದೆ.
ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದೆ. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಲಾರಿಯಡಿಗೆ ರಿಕ್ಷಾ ಚಾಲಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕನನ್ನು ಸುಂದರ ಚಿಟ್ಟಿಕ್ಕಾನ ( 56) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ ಎಂದು ತಿಳಿದುಬಂದಿದೆ.



