Friday, April 11, 2025
Google search engine

Homeರಾಜಕೀಯಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುವೆ:...

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುವೆ: ಡಿ.ಕೆ. ಶಿವಕುಮಾರ್‌

ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಕೇಳಿದಾಗ “ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದು ತಿಳಿಸಿದರು.

ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬುಧವಾರ ಸಂಜೆ ಎತ್ತಿನಹೊಳೆ ಏತ ನೀರಾವರಿಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗಿದೆ. ಈ ಯೋಜನೆಯಿಂದ ತುಮಕೂರು, ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರದ ಸ್ವಲ್ಪ ಭಾಗ ಸೇರಿದಂತೆ ಏಳು ಜಿಲ್ಲೆಗಳ 75 ಲಕ್ಷ ಜನರಿಗೆ ಉಪಯೋಗವಾಗುತ್ತದೆ. ಪ್ರಸ್ತುತ 550 ಕ್ಯೂಸೆಕ್ಸ್ ನೀರನ್ನು ಪಂಪ್ ಮಾಡಲಾಗುತ್ತಿದೆ. ಇದರ ಆರು ಪಟ್ಟು ನೀರನ್ನು ಪಂಪ್ ಮಾಡಲಾಗುವುದು. ಪ್ರಸ್ತುತ ಮೇಲೆತ್ತಿರುವ ನೀರನ್ನು ವಾಣಿವಿಲಾಸ (ಮಾರಿಕಣಿವೆ) ಸಾಗರಕ್ಕೆ ಹರಿಸಲಾಗುತ್ತಿದೆ. ಮಳೆಗಾಲ ಮುಗಿಯುವ ಹೊತ್ತಿಗೆ ಒಂದಷ್ಟು ನೀರನ್ನು ಎತ್ತಬೇಕಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದರು.

ಅಲ್ಲಲ್ಲಿ ಅರಣ್ಯ ಇಲಾಖೆಯ ಭೂಮಿಯ ಸ್ವಾಧೀನ ತೊಂದರೆ ಇದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ಈಗಾಗಲೇ ಅನೇಕ ಕಡೆ ಅರಣ್ಯ ಇಲಾಖೆಗೆ ಬದಲಿ ಭೂಮಿ ನೀಡಲಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಮಹತ್ವಕಾಂಕ್ಷಿಯ ಕಾರ್ಯಕ್ರಮ ಇದಾಗಿದ್ದು, ಇದಕ್ಕೆ ಸಂಬಂಧಪಟ್ಟ ಎಲ್ಲಾ ಜಿಲ್ಲೆಯ ಶಾಸಕರನ್ನು, ಜನಪ್ರತಿನಿಧಿಗಳನ್ನು ಕರೆದು ಉದ್ಘಾಟನೆ ಮಾಡಲಾಗುವುದು. ಸಾವಿರಾರು ಜನರು ಬಂದು ವೀಕ್ಷಣೆ ಮಾಡುವಂತೆ ಉದ್ಘಾಟನಾ ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲರೂ ಒಂದೇ ಕಡೆಗೆ ಬಂದು ಉದ್ಘಾಟನೆ ಮಾಡುವ ಬದಲು ಪ್ರಮುಖವಾದ ಸ್ಥಳಗಳಲ್ಲಿ ಚಾಲನೆ ನೀಡುವಂತೆ ಕಾರ್ಯಕ್ರಮ ಮಾಡಲಾಗುವುದು. ಈ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬಿತ್ತರಗೊಳ್ಳುವಂತೆ ನೋಡಿಕೊಳ್ಳಲಾಗುವುದು. ಈ ಯೋಜನೆ ಬಗ್ಗೆ ಸಾಕಷ್ಟು ಜನ ಟೀಕೆ ಮಾಡಿದರು. ಆದರೆ ಇಂದು, ಟೀಕೆಗಳು ಸತ್ತಿವೆ ಕೆಲಸ ಮಾತ್ರ ಉಳಿದಿದೆ. ಈ ಯೋಜನೆಗೆ ಸಹಕಾರ ನೀಡಿದ ಎಲ್ಲಾ ಇಲಾಖೆ ಹಾಗೂ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದರು.

ಮಣ್ಣು ಅಗೆಯುವ ಕಾರ್ಮಿಕನಿಂದ ಹಿಡಿದು ಎಂಜಿನಿಯರ್‌ಗಳ ತನಕ ಉತ್ತಮ ಕೆಲಸ ಮಾಡಿದ್ದಾರೆ. ಸುಮಾರು ಒಂದುವರೆ ಕಿಲೋಮೀಟರ್ ದೂರ ಸುರಂಗ ಮಾರ್ಗದ ಮೂಲಕವೇ ನೀರು ಹೋಗುತ್ತಿದೆ. ರೈತರು ತಮ್ಮ ಭೂಮಿಯನ್ನು ಕೊಟ್ಟು ಸಹಕಾರ ನೀಡಿದ್ದಾರೆ. ನಾವು ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಬೇಕು. ಮುಖ್ಯಮಂತ್ರಿಗಳ ಬಳಿ ಮಾತನಾಡಿ ಉದ್ಘಾಟನಾ ದಿನಾಂಕವನ್ನು ಅಂತಿಮ ಮಾಡಲಾಗುವುದು ಎಂದು ಹೇಳಿದರು.

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಸಂಜೆ ತೀರ್ಪು ಪ್ರಕಟ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ, ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಸಂಜೆ 4.30 ಕ್ಕೆ ಹೈಕೋರ್ಟ್ ವಿಭಾಗೀಯ ಪೀಠವು ತೀರ್ಪು ಪ್ರಕಟಿಸಲಿದೆ.

ಡಿಕೆ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಸರ್ಕಾರದ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು. ಯತ್ನಾಳ್ ಪರ ಹಿರಿಯ ವೆಂಕಟೇಶ ದಳವಾಯಿ ವಾದ ಮಂಡಿಸಿದರು. ಸಿಬಿಐ ಪರ ಹಿರಿಯ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿದರು.

RELATED ARTICLES
- Advertisment -
Google search engine

Most Popular