ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆಯೊಂದು ನಡೆದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದ ಕಾರ್ಮಿಕನ ಮೃತದೇಹವನ್ನು ಪ್ರಾಣಿಯಂತೆ ಎಳೆದೊಯ್ದ ಘಟನೆಗೆ ಸಂಬಂಧಿಸಿದಂತೆ ಇದೀಗ ಸೇಡಂ ಪೊಲೀಸರು 6 ಕಾರ್ಮಿಕರನ್ನು ಬಂಧಿಸಿದ್ದಾರೆ.
ಸುಮೊಟೋ ದಾಖಲಿಸಿಕೊಂಡಿರುವ ಪೊಲೀಸರು ಹೈದರ್ ಅಲಿ, ಅಜಯ್, ರವಿಶಂಕರ್, ಹರಿಂದರ್ ನಿಶಾದ್, ರಮೇಶಚಂದ್ರ ಅಖಿಲೇಶ್ ಸೇರಿ 6 ಮಂದಿ ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ: ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿನ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಸಿಬ್ಬಂದಿಗಳು ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರ ಎಳೆದೊಯ್ದ ಘಟನೆ ಶ್ರೀ ಸಿಮೆಂಟ್ ಕಂಪನಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಚಂದನ್ ಸಿಂಗ್ (35) ಎಂದು ಗುರುತಿಸಲಾಗಿದೆ.
ಚಂದನ್ ಸಿಂಗ್ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕೆಲಸ ಮಾಡುವಾಗ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಂದನ್ ಸಿಂಗ್ ಮೃತದೇಹವನ್ನು ಸಿಬ್ಬಂದಿಗಳು ಪ್ರಾಣಿ ತರ ಎಳೆದುಕೊಂಡು ಹೋಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.