Friday, April 11, 2025
Google search engine

Homeಅಪರಾಧಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

ಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.

ಸದ್ಯ ಮೂರು ಕೇಸ್​ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೇ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮೊದಲು ಮುನಿರತ್ನ ಬಂಧನವಾಗಿತ್ತು. ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅದಾದ ಮರುದಿನವೇ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ಮುನಿರತ್ನ ತಮ್ಮ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ ಮೇಲ್ ಮಾಡಿದ್ದಾರೆ. ಹನಿಟ್ರ್ಯಾಪ್​ ಕೂಡ ಮಾಡಿಸಿದ್ದಾರೆ ಎಂದು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

RELATED ARTICLES
- Advertisment -
Google search engine

Most Popular