Monday, April 21, 2025
Google search engine

Homeಸ್ಥಳೀಯನವೆಂಬರ್‌ನಲ್ಲಿ ಜಾತಿ ಜನಗಣತಿ ವರದಿ ನನ್ನ ಕೈ ಸೇರಬಹುದು: ಸಿಎಂ ಸಿದ್ದರಾಮಯ್ಯ

ನವೆಂಬರ್‌ನಲ್ಲಿ ಜಾತಿ ಜನಗಣತಿ ವರದಿ ನನ್ನ ಕೈ ಸೇರಬಹುದು: ಸಿಎಂ ಸಿದ್ದರಾಮಯ್ಯ

ಮೈಸೂರು: ಸಾಮಾಜಿಕ,ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಬೇಕು ಎಂದರೆ ಜಾತಿ ಗಣತಿ ಮುಖ್ಯ. ಇದರ ಆಧಾರದ ಮೇಲೆಯೇ ಯಾವ ಜಾತಿ ಎಷ್ಟು ಹಿಂದುಳಿದಿದೆ ಎಂದು ತಿಳಿಯಬಹುದು ಎಂದು ಜಾತಿಗಣತಿಯಿಂದ ದೇಶ ಇಬ್ಬಾಗವಾಗಲಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ವಿಶೇಷ ವಿಮಾದ ಮೂಲಕ ಮೈಸೂರಿಗೆ ಆಗಮಿಸಿದ ಅವರು ಮಂಡಕಳ್ಳಿ ವಿಮಾನದಲ್ಲಿ ಇಂದು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ. ಮುಸ್ಲಿಮರಿಗೆ ಒಂದು ಸೀಟು ಕೊಡದೆ ಇವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವುದರಲ್ಲಿ ಅರ್ಥವಿಲ್ಲ, ನಾವು ಏನು ಹೇಳುತ್ತೇವೋ ಅದು ಸರಿಯಾಗಿರಬೇಕು, ವಸ್ಥುಸ್ಥಿತಿ ಬೇರೆ, ಹೇಳಿಕೆ ಬೇರೆ ಇರಬಾರದು. ಸತ್ಯವನ್ನು ಹೇಳಬೇಕು ಎಂದು ಕುಟುಕಿದರು.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳನ್ನು ತಿಳಿದರೆ ಯಾವ ಜಾತಿ ಎಷ್ಟು ಹಿಂದುಳಿದಿದೆ ಎಂಬ ಅಂಕಿ ಅಂಶ ತಿಳಿಯುತ್ತದೆ. ಇದರಿಂದ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ, ಆ ನಿಟ್ಟಿನಲ್ಲಿ ನಾನು ಹಿಂದೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಸರ್ವೆ ಮಾಡಿಸಿದ್ದೆ.ಕಾಂತರಾಜು ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವರದಿ ಸಲ್ಲಿಸಿದ್ದರು. ಅವರು ಸ್ವೀಕರಿಸಿರಲಿಲ್ಲ. ಈಗಿನ ಅಧ್ಯಕ್ಷರಿಗೆ ಕಾಂತರಾಜು ವರದಿ ಸಲ್ಲಿಸುವಂತೆ ಹೇಳಿದ್ದೇನೆ. ಅವರು ನವೆಂಬರ್‌ಗೆ ವರದಿ ನೀಡುವುದಾಗಿ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

RELATED ARTICLES
- Advertisment -
Google search engine

Most Popular