Friday, April 4, 2025
Google search engine

Homeರಾಜ್ಯನಾಳೆ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ

ನಾಳೆ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ

ನವದೆಹಲಿ: ನಾಳೆ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸುತ್ತಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ನಾಳಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿಯೇ ಹೇಳಲಾಗುತ್ತಿತ್ತು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಕೂಡ ನಾಳಿನ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿಯೂ ತಿಳಿಸಿದ್ದರು.

ಆದರೇ ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸುತ್ತಿಲ್ಲ. ಮುಂದಿನ ವಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಜಾತಿ ಗಣತಿ ವರದಿಯಲ್ಲಿ ಏನಿದೆ ಅಂತ ನನಗೆ ಗೊತ್ತಿಲ್ಲ. ಇದುವರೆಗೂ ವರದಿ ಓಪನ್ ಕೂಡ ಮಾಡಿಲ್ಲ ಎಂಬುದಾಗಿ ತಿಳಿಸಿದರು.

RELATED ARTICLES
- Advertisment -
Google search engine

Most Popular