ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರಕ್ಕೆ ಎಳ್ಳು-ನೀರು ಬಿಟ್ಟು ಶ್ರೀರಂಗಪಟ್ಟಣದ ಸ್ನಾನಘಟ್ಟದ ಕಾವೇರಿ ನದಿಯಲ್ಲಿ ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳಿಂದ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲಾಯಿತು. ಕಾವೇರಿ ನದಿಗೆ ಎಳ್ಳು ಜೀರಿಗೆ ಬಿಟ್ಟು ತಿಥಿ ಕಾರ್ಯ ಮಾಡಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ , ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ತಮಿಳುನಾಡಿಗೆ ನೀರು ನಿಲ್ಲಿಸದ ಹೊರತು ಶ್ರೀರಂಗಪಟ್ಟಣದ ದಸರೆ ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
