Monday, December 2, 2024
Google search engine

Homeರಾಜ್ಯಸುದ್ದಿಜಾಲಕಾವೇರಿ ಹೋರಾಟ: ಟಿ.ನರಸೀಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಕಾವೇರಿ ಹೋರಾಟ: ಟಿ.ನರಸೀಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ


ಟಿ.ನರಸೀಪುರ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಟಿ.ನರಸೀಪುರ ಬಂದ್ ಯಶಸ್ವಿಯಾಗಿದೆ. ನಗರದಲ್ಲಿ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಕಾವೇರಿ, ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ನಗರದ ವಿವಿಧ ಸಂಘ-ಸಂಸ್ಥೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಲು ಇಂದು (ಮಂಗಳವಾರ) ಟಿ.ನರಸೀಪುರ ಬಂದ್‌ಗೆ ಕರೆ ನೀಡಿದ್ದವು. ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಬೆಳಗ್ಗೆ ೬ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ. ಈಗಾಗಲೇ ಪಟ್ಟಣದ ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಬೆಂಬಲ ನೀಡಿದ್ದಾರೆ.

ಖಾಸಗಿ ಬಸ್‌ಗಳ ಸಂಚಾರವೂ ವಿರಳವಾಗಿತ್ತು. ಪ್ರಮುಖ ಬೀದಿಗಳಲ್ಲಿ ಜನರ ಓಡಾಟ ತೀರಾ ಕಡಿಮೆ ಕಂಡುಬಂತು. ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ. ಆದರೂ ಮಕ್ಕಳ ಸಂಖ್ಯೆ ವಿರಳವಾಗಿತ್ತು. ವಿದ್ಯೋದಯ ವೃತ್ತದಿಂದ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಮುನ್ನೆಚ್ಚೆರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಕಾವೇರಿ ವಿಚಾರಕ್ಕಾಗಿ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ಕೊಟ್ಟಿದ್ದ ಬೆಂಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ದೊರೆತಿದೆ. ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನಾಕಾರರು ಬೆಂಗಳೂರು ನಗರದಲ್ಲಿ ಬೀದಿಗಿಳಿದು ಹೋರಾಟ ನಡೆಸಿದರು.

RELATED ARTICLES
- Advertisment -
Google search engine

Most Popular