ಪಿರಿಯಾಪಟ್ಟಣ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕರ್ನಾಟಕ ಕೃಷಿಕರ ಸಂಘದ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್ ಬೋವಿ ಖಂಡಿಸಿದರು.
ಸಾಲಿಗ್ರಾಮ ತಾಲೂಕಿನ ಕರ್ತಾಳು ಗ್ರಾಮದಲ್ಲಿ ಶ್ರೀ ಸ್ವರ್ಣಗೌರಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಲಿಗ್ರಾಮ ತಾಲೂಕು ಅಧ್ಯಕ್ಷರಾದ ಕರ್ತಾಳು ಗ್ರಾಮದ ಶಂಭುಲಿಂಗಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಕನ್ನಡಿಗರ ವಿರುದ್ಧವಾಗಿದ್ದು ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಮನವರಿಕೆ ಮಾಡಿಕೊಡಲು ಕರ್ನಾಟಕದ ವಕೀಲರು ವಿಫಲರಾಗಿದ್ದಾರೆ.ಈ ಬಾರಿ ಸರಿಯಾದ ಸಮಯಕ್ಕೆ ಮಳೆಯಾಗದೆ ಜಲಾಶಯಗಳು ಖಾಲಿಯಾಗಿದ್ದು ರೈತರ ಕೃಷಿ ಚಟುವಟಿಕೆಗಳಿಗೂ ತೊಂದರೆಯಾದ ಹಿನ್ನೆಲೆ ರೈತರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಆದರೂ ಸಹ ನಮ್ಮಲ್ಲಿಯೇ ಕಾವೇರಿ ಜಲಾಶಯಗಳಲ್ಲಿ ನೀರಿನ ಅಭಾವವಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ ಈ ವಿಚಾರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸರ್ಕಾರದ ನಡೆ ರೈತ ವಿರೋಧಿಯಾಗಿದ್ದು ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಸಂಘಟನೆ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ಧಾರ್ಮಿಕ ಆಚರಣೆಗಳು ಗ್ರಾಮಾಂತರ ಪ್ರದೇಶಗಳಲ್ಲಿ ಇಂದಿಗೂ ಪ್ರಸಿದ್ಧಿಯಾಗಿದ್ದು ನಮ್ಮ ಸಂಸ್ಕೃತಿ ಸಂಪ್ರದಾಯವನ್ನು ನಾವು ಮರೆಯದೆ ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಬೇಕಿದೆ ಈ ನಿಟ್ಟಿನಲ್ಲಿ ಕರ್ತಾಳು ಗ್ರಾಮದಲ್ಲಿ ಶ್ರೀ ಸ್ವರ್ಣ ಗೌರಿ ವಿಸರ್ಜನಾ ಮಹೋತ್ಸವ ದಿನ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಒಟ್ಟಾಗಿ ಸೇರಿ ವಿಜೃಂಭಣೆಯಿಂದ ಹಬ್ಬ ಆಚರಿಸುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ಈ ಸಂದರ್ಭ ಕರ್ನಾಟಕ ಕೃಷಿಕರ ಸಂಘದ ರಾಜ್ಯ ಗೌರವಾಧ್ಯಕ್ಷ ವೆಂಕಟೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕೆ ನೂತನ್ ಕುಮಾರ್, ಸಾಲಿಗ್ರಾಮ ತಾಲೂಕು ಅಧ್ಯಕ್ಷ ಶಂಭುಲಿಂಗಪ್ಪ, ಕೆ.ಆರ್ ನಗರ ತಾಲೂಕು ಅಧ್ಯಕ್ಷ ಪ್ರಸನ್ನ ಕುಮಾರ್, ಪ್ರಧಾನ ಕಾರ್ಯದರ್ಶಿ ಸೋಮೇಗೌಡ, ಉಪಾಧ್ಯಕ್ಷ ಸಿದ್ದೇಗೌಡ, ಗ್ರಾಮ ಘಟಕ ಅಧ್ಯಕ್ಷ ಕೆಂಪೇಗೌಡ, ಉಮೇಶ್, ಅರಕಲಗೂಡು ಅಧ್ಯಕ್ಷ ಸೋಮಶೇಖರಪ್ಪ, ಕೆ.ಆರ್ ಪೇಟೆ ಅಧ್ಯಕ್ಷ ಸತೀಶ್, ಸಾಲಿಗ್ರಾಮ ಉಪಾಧ್ಯಕ್ಷ ಕೆ.ಕೆ ಕೃಷ್ಣೇಗೌಡ, ಹೊಸೂರು ಕಲ್ಲಹಳ್ಳಿ ಗ್ರಾಮ ಘಟಕ ನಿರ್ದೇಶಕ ದೇವರಾಜ್, ಸೋಮಾಚಾರ್, ಸ್ವಾಮಿಗೌಡ, ಕುಪ್ಪಳ್ಳಿ ಗ್ರಾಮ ಘಟಕ ಅಧ್ಯಕ್ಷ ಗೋವಿಂದೇಗೌಡ ಇದ್ದರು.