ಮಂಡ್ಯ: ಕೆ.ಆರ್.ಎಸ್ ಡ್ಯಾಂ ನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಶ್ರೀರಂಗಪಟ್ಟಣದಲ್ಲಿ ನೇಣು ಕುಣಿಕೆಗಳನ್ನು ಹಿಡಿದು ರೈತರು ಪ್ರತಿಭಟ ನಡೆಸಿದ್ದಾರೆ.
ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿವರೆಗೂ ನೇಣು ಕುಣಿಕೆ ಹಿಡಿದು ರೈತರಿಂದ ಪ್ರತಿಭಟನಾ ಜಾಥಾ ನಡೆಸಿದ್ದಾರೆ.
ಪಟ್ಟಣದ ತಾಲೂಕು ಕಚೇರಿ ಮುಂದೆ ಧರಣಿ ಕುಳಿತು ಸರ್ಕಾರಕ್ಕೆ ಧಿಕ್ಕಾರ ಕೂಗಿ ನೀರು ನಿಲ್ಲಿಸುವಂತೆ ರೈತರು ಒತ್ತಾಯಿಸಿದ್ದಾರೆ.
ಗ್ಯಾರಂಟಿ ಭಾಗ್ಯದ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟು ರೈತರಿಗೆ ನೇಣು ಭಾಗ್ಯ ನೀಡ್ತಿದೆ. ನೀರು ನಿಲ್ಲಿಸದಿದ್ದರೆ ಜಿಲ್ಲೆಯ ರೈತರ ಸಾಮೂಹಿಕ ಆತ್ಮಹತ್ಯೆಯ ಎಚ್ಚರಿಕೆಯನ್ನು ನೀಡಿದ್ದಾರೆ.