Friday, April 11, 2025
Google search engine

Homeಅಪರಾಧಸೆನ್ಸಾರ್ ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ ಸಿಬಿಐ ಬಲೆಗೆ

ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ ಸಿಬಿಐ ಬಲೆಗೆ

ಬೆಂಗಳೂರು: ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಚಿತ್ರತಂಡದಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.

ಪ್ರಶಾಂತ್ ಕುಮಾರ್ ಸಿಬಿಐ ಬಲೆಗೆ ಬಿದ್ದಿರುವ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ.

ಅಡವಿ ಹೆಸರಿನ ಕನ್ನಡ ಚಲನಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಕೊಡಲು 15 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, 12 ಸಾವಿರ ರೂ. ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಬಿಐ ಅಧಿಕಾರಿಗಳು‌ ಪ್ರಶಾಂತ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಅಡವಿ ಹೆಸರಿನ ಚಿತ್ರತಂಡ ಸೆನ್ಸಾರ್ ಸರ್ಟಿಫಿಕೇಟ್ ಪಡೆಯಲು ನವೆಂಬರ್ 21 ರಂದು ಮಲ್ಲೇಶ್ವರಂನ ಎಸ್ ಆರ್​ ವಿ ಸ್ಟುಡಿಯೋದಲ್ಲಿ ಚಿತ್ರದ ಪ್ರದರ್ಶನ ಆಯೋಜಿಸಿತ್ತು. ಚಿತ್ರ ವೀಕ್ಷಿಸಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ ಪ್ರಶಾಂತ್ ಕುಮಾರ್, ಕ್ಷುಲ್ಲಕ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ನೀಡಲು 15 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಒಂದು ವಾರದಿಂದ ಸೆನ್ಸಾರ್ ಸರ್ಟಿಫಿಕೇಟ್ ನೀಡದೆ ಸತಾಯಿಸುತ್ತಿದ್ದುದರಿಂದ‌ ಬೇಸತ್ತ ಚಿತ್ರ ನಿರ್ಮಾಪಕ ಎ.ವಿ. ನಾಗರಾಜ್ ಸಿಬಿಐ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರನ್ವಯ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಸಿಬಿಐ ಅಧಿಕಾರಿಗಳು, 12 ಸಾವಿರ ರೂ. ಸ್ವೀಕರಿಸುತ್ತಿದ್ದ ಪ್ರಶಾಂತ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular