Friday, April 4, 2025
Google search engine

HomeUncategorizedರಾಷ್ಟ್ರೀಯ2026ರಿಂದ 10ನೇ ತರಗತಿ ಪರೀಕ್ಷೆಯನ್ನು ವರ್ಷಕ್ಕೆರಡು ಸಲ ನಡೆಸಲು ಸಿಬಿಎಸ್‌ಇ ಯೋಜನೆ

2026ರಿಂದ 10ನೇ ತರಗತಿ ಪರೀಕ್ಷೆಯನ್ನು ವರ್ಷಕ್ಕೆರಡು ಸಲ ನಡೆಸಲು ಸಿಬಿಎಸ್‌ಇ ಯೋಜನೆ

ಹೊಸದಿಲ್ಲಿ: 2026ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ವರ್ಷಕ್ಕೆರಡು ಸಲ ಪರೀಕ್ಷೆ ಬರೆಯಲು ಅವಕಾಶ ನೀಡುವ ಯೋಜನೆಯೊಂದನ್ನು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯು ರೂಪಿಸುತ್ತಿದ್ದು, ಫೆಬ್ರವರಿ ಮತ್ತು ಮೇ ತಿಂಗಳುಗಳಲ್ಲಿ ಈ ಪರೀಕ್ಷೆಗಳು ನಡೆಯುವ ನಿರೀಕ್ಷೆಯಿದೆ.

ಜೊತೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೂ, ತನ್ನ ಸಚಿವಾಲಯವು ಶೈಕ್ಷಣಿಕ ವರ್ಷದಲ್ಲಿ ಎರಡು ಸಲ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಶಾಲಾ ಶಿಕ್ಷಣ ಕಾರ್ಯದರ್ಶಿ, ಸಿಬಿಎಸ್‌ಇ ಅಧ್ಯಕ್ಷ ಮತ್ತು ಸಚಿವಾಲಯದ ಇತರ ಅಧಿಕಾರಿಗಳೊಂದಿಗೆ ಚರ್ಚೆಗಳನ್ನು ನಡೆಸಿದೆ ಎಂದು ಪ್ರಕಟಿಸಿದ್ದಾರೆ.

ಸಿಬಿಎಸ್‌ಇ ಕರಡು ಯೋಜನೆಯನ್ನು ಸಾರ್ವಜನಿಕ ಸಮಾಲೋಚನೆಗಾಗಿ ಶೀಘ್ರವೇ ಮಂಡಿಸಲಿದೆ ಎಂದು ಪ್ರಧಾನ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಈ ಹಿಂದೆ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಮಾರ್ಗಸೂಚಿಗಳಲ್ಲಿ ಪ್ರಮುಖವಾಗಿ ಹೇಳಲಾಗಿದ್ದ ಈ ಯೋಜನೆಯು ಜಾರಿಗೊಂಡರೆ ವಿದ್ಯಾರ್ಥಿಗಳಿಗೆ 2026-27ರಿಂದ ಆರಂಭಗೊಳ್ಳುವ ಶೈಕ್ಷಣಿಕ ಅವಧಿಯಲ್ಲಿ ಎರಡು ಸಲ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಮತ್ತು ತಮ್ಮ ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳಲು ಅವಕಾಶ ಲಭಿಸಲಿದೆ.

RELATED ARTICLES
- Advertisment -
Google search engine

Most Popular