Saturday, April 19, 2025
Google search engine

Homeಅಪರಾಧಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ : ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ : ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಶೇಖರಿಸಿಟ್ಟಿದ್ದ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದು, ಬರೋಬ್ಬರಿ 2.50 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ.

ಡಿಸೆಂಬರ್ 27 ರಂದು ರಂದು ಚೊಕ್ಕನಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಶೇಖರಿಸಿಟ್ಟಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಶೇಖರಿಸಿಟ್ಟಿದ್ದ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದು, ಬರೋಬ್ಬರಿ 2.50 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ.

ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಬೆಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಹೊಸ ವರ್ಷದ ಆಚರಣೆಯ ಸಲುವಾಗಿ, ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಮನೆಯಲ್ಲಿ ಶೇಖರಿಸಿಟ್ಟಿರುವುದಾಗಿ ತಿಳಿಸಿದ್ದಾನೆ. ಆತನ ಮನೆಯಿಂದ 1) ಹೈಡೋಗಾಂಜಾ 3 ಕೆ.ಜಿ 55 2) 5 16 8.2 65 ໑໐ 3) 2.2.8 -40. 4) 5. 130 . 5) 2.3 0 ಎಂ.ಡಿ.ಎಂ.ಎ ಕ್ರಿಸ್ಟಲ್, 6) ಮೂರು ತೂಕದ ಯಂತ್ರಗಳು, 7) 2 ಮೊಬೈಲ್ ಫೋನ್ ಹಾಗು ₹ 1.30 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ ₹ 2,50,00,000/-(ಎರಡು ಕೋಟಿ ಐವತ್ತು ಲಕ್ಷ ರೂಪಾಯಿ).

ದಿನಾಂಕ:28/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಯಿತು. ದಿನಾಂಕ:30/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

RELATED ARTICLES
- Advertisment -
Google search engine

Most Popular