ರಾಮನಗರ : ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಸೋಮವಾರ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ತಿಮ್ಮೇಗೌಡ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಿಡದಿ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಿಡದಿ ಸಮೀಪದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ದೇಹ ಪತ್ತೆಯಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಿಡದಿ ಪೊಲೀಸರು ಬಂದು ಗಮನಿಸಿ ದೇಹವನ್ನು ಕೆಳಕ್ಕೆ ಇಳಿಸಿದ್ದರು. ಆನಂತರ ಮಾಹಿತಿ ಕಲೆ ಹಾಕಿದಾಗ ಮೃತಪಟ್ಟಿರುವುದು ಪೊಲೀಸ್ ಅಧಿಕಾರಿ ಎನ್ನುವುದು ತಿಳಿಯಿತು.
ಈ ಸಂಬಂಧ ದೂರು ದಾಖಲಿಸಿಕೊಂಡು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಕುಟುಂಬದವರು ಹಾಗೂ ಪೊಲೀಸ್ ಇಲಾಖೆಯವಲ್ಲಿರುವ ಅವರ ಪರಿಚಯಸ್ಥರಿಂದಲೂ ವಿವರ ಸಂಗ್ರಹಿಸಲಾಗುತ್ತಿದೆ. ತನಿಖೆ ನಂತರ ನಿಖರ ಕಾರಣ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.