Saturday, April 19, 2025
Google search engine

Homeಅಪರಾಧಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

ಮಂಗಳೂರು : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ಕೇರಳದ ತಲಶ್ಶೇರಿ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮೊಹಮ್ಮದ್ ರಫೀಕ್ @ ಮುಡಿಪು ರಫೀಕ್,(36) ಎಂಬಾತನನ್ನು ಬೆಂಗಳೂರಿನ ಹೊಸಕೋಟೆಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಹಿಳಾ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಈತನು ಈ ಹಿಂದೆ ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಫಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ, ತಲಶ್ಶೇರಿ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ , ಸುದೀಪ್ ಎಂ ವಿ,ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ಕೇರಳದ ತಲಶ್ಶೇರಿ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ
ಮೊಹಮ್ಮದ್ ರಫೀಕ್ @ ಮುಡಿಪು ರಫೀಕ್,(36) ಎಂಬಾತನನ್ನು ಬೆಂಗಳೂರಿನ ಹೊಸಕೋಟೆಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಹಿಳಾ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಈ ಹಿಂದೆ ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಫಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ, ತಲಶ್ಶೇರಿ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ , ಸುದೀಪ್ ಎಂ ವಿ,ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular