ಮಂಗಳೂರು: ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1993 ರಲ್ಲಿ ದಾಖಲಾದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ಠಾಣಾ ವ್ಯಾಫ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿ ಮುಸ್ತಫಾ @ಮೊಹಮ್ಮದ್ ಮುಸ್ತಫಾ(63) ಎಂಬುವವರನ್ನು ಉಡುಪಿ ಜಿಲ್ಲೆಯ ಪಲಿಮಾರು ಪರಿಸರದಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.