ರಾಮನಗರ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಸಾಮಾಜಿಕ ಅರಣ್ಯ ಇಲಾಖೆಯ ಸಸ್ಯ ಕ್ಷೇತ್ರದಲ್ಲಿ ಸಸಿ ನೆಟ್ಟು, ಶಾಲಾ ಮಕ್ಕಳಿಗೆ ಸಸಿಗಳನ್ನು ವಿತರಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ನರೇಗಾ ಶಾಖೆ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.