Saturday, April 19, 2025
Google search engine

Homeರಾಜ್ಯಸುದ್ದಿಜಾಲಬಳ್ಳಾರಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಬಳ್ಳಾರಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಬಳ್ಳಾರಿ: ಕರ್ನಾಟಕ ಏಕೀಕರಣದ ಸಮಯದಲ್ಲಿ ಹೋರಾಡಿದ ಮಹನೀಯರ ಹೆಸರನ್ನು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ನಾಮಕರಣ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು. ಜಿಲ್ಲಾಡಳಿತ ವತಿಯಿಂದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ೬೮ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಕರ್ನಾಟಕ ರಾಜ್ಯವನ್ನು ಒಗ್ಗೂಡಿಸಲು ಮತ್ತು ಏಕೀಕರಣಕ್ಕೆ ಶ್ರಮಿಸಿದ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಅವರ ಹೆಸರನ್ನು ರಸ್ತೆಗಳಿಗೆ, ವೃತ್ತಗಳಿಗೆ ನಾಮಕರಣಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ವರ್ಷವಿಡೀ ಕರ್ನಾಟಕ ಸಂಭ್ರಮಾಚರಣೆ: ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಂಡ ಈ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗಿ ಅತ್ತ ಇಂಗ್ಲೀಷ್ ಕಲಿಯದೇ ಇತ್ತ ಕನ್ನಡವನ್ನೂ ಅರಿಯದೆ ಕಂಗ್ಲೀಷ್‌ಗಳಾಗುವುದು ಬೇಡ. ಅತ್ಯಂತ ಶಕ್ತಿ ಶಾಲಿಯಾದ ಹಾಗೂ ಅಗಾದ ಜ್ಞಾನ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ಬಳಸಿ ಉಳಿಸೋಣ.
ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ವತಿಯಿಂದ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳು, ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular