ಶಿಕ್ಷಣ ಇಲಾಖೆ ಮೇಲಧಿಕಾರಿಗಳು ಹಾಗೂ ಕ್ಲಸ್ಟರ್ ಮಟ್ಟದ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಭಾಗಿ
ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಿಆರ್ ಸಿ ಶಿವರಾಜ್ ತಿಳಿಸಿದರು.
ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಪಿಎಂಶ್ರೀ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಸರ್ಕಾರ ಜಾರಿಗೊಳಿಸಿರುವ ಕಲಿಕಾ ಹಬ್ಬ ಕಾರ್ಯಕ್ರಮದಿಂದಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಪೂರ್ತಿ ತುಂಬುವ ಕೆಲಸವಾಗಲಿದೆ ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರೇರಣಾತ್ಮಕ ಕಥೆ ಸಾಹಿತ್ಯ ಓದು ಕ್ರೀಡೆ ಮತ್ತು ನಲಿಕಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತರಲು ಸಹಕಾರಿಯಾಗುತ್ತದೆ ಎಂದರು.

ಸಿಆರ್ ಪಿ ಸುದರ್ಶನ್ ಅವರು ಮಾತನಾಡಿ ಕಲಿಕೆಯಲ್ಲಿ ಹಿಂದುಳಿದ ಸರ್ಕಾರಿ ಶಾಲಾ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಎಫ್ಎಲ್ಎನ್ ಕಾರ್ಯಕ್ರಮ ಜಾರಿಗೆ ತಂದಿದ್ದು ಶಿಕ್ಷಕರು ಇದರ ಯಶಸ್ಸಿಗೆ ಶಕ್ತಿ ಮೀರಿ ಶ್ರಮಿಸಸಬೇಕು, ಸೋಲು ಗೆಲುವು ಸಮಾನ ಸ್ವೀಕಾರ ಅನುಭವವನ್ನು ಮಕ್ಕಳು ಬೆಳೆಸಿಕೊಳ್ಳಲು ಇಂತಹ ಚಟುವಟಿಗಳು ಸಹಕಾರಿಯಾಗಲಿವೆ ಎಂದರು.
ಕಾರ್ಯಕ್ರಮದಲ್ಲಿ ಬಿಆರ್ ಪಿ ರವೀಂದ್ರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವ್ ಮತ್ತು ಸದಸ್ಯರು, ಗ್ರಾ.ಪಂ ಅಧ್ಯಕ್ಷ ರವಿಕುಮಾರ್, ಮಾಜಿ ಅಧ್ಯಕ್ಷ ಕಾಮರಾಜ್ ಮತ್ತು ಸದಸ್ಯರು, ಯಜಮಾನರಾದ ಜಯಶಂಕರ್, ಮುಖ್ಯ ಶಿಕ್ಷಕರಾದ ಶಿವಣ್ಣ ಮತ್ತು ಶಿಕ್ಷಕರು, ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಗ್ರಾಮಸ್ಥರು ಇದ್ದರು.