ಮೈಸೂರು: ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಸೂಪರ್ ಸ್ವಚ್ಚ ಲೀಗ್ ನಗರ ಹಿನ್ನೆಲೆಯಲ್ಲಿ ಅರಮನೆಯ ಮುಂಭಾಗ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮೈಸೂರು ಪಾಕ್ ವಿತರಿಸಿ ಪೌರಕಾರ್ಮಿಕರಿಗೆ ಜೈಕಾರ ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.
ನಂತರ ಮಾತನಾಡಿದ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಸ್ವಚ್ಛ ನಗರ ಮೈಸೂರು
ಸೂಪರ್ ಸ್ವಚ್ಚ ಲೀಗ್ ನಗರ ಬಂದಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ, ಇದಕ್ಕೆ ಮೂಲ ಕಾರಣಕರ್ತರಾದ ಕೂಡ ಕಾರ್ಮಿಕರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ, ಮುಂಬರುವ ದಿನಗಳಲ್ಲಿ ಮೈಸೂರು ನಗರ ಪ್ರಥಮ ಸ್ಥಾನ ಬರಲಿ ಎಂದು ಆಶಿಸುತ್ತೇವೆ, ಪೌರಕಾರ್ಮಿಕರ ಜೊತೆ ನಾವು ಎಂದಿಗೂ ಇರುತ್ತೇವೆ, ಪೌರಕಾರ್ಮಿಕರ ಸಮಸ್ಯೆಗೆ ರಾಜ್ಯ ಸರ್ಕಾರ ಸ್ಪಂದಿಸುವ ವಿಶ್ವಾಸ ಇದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೆ.ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ಹರೀಶ್ ನಾಯ್ಡು, ಪಾಂಡು, ಷಣ್ಮುಗ, ಹಾಗೂ ರಸ್ತೆ ಬದಿ ವ್ಯಾಪಾರಿಗಳು ಹಾಜರಿದ್ದರು.