Friday, April 11, 2025
Google search engine

HomeUncategorizedರಾಷ್ಟ್ರೀಯಕೇಂದ್ರ ಬಜೆಟ್: ಪ್ರವಾಸೋದ್ಯಮ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

ಕೇಂದ್ರ ಬಜೆಟ್: ಪ್ರವಾಸೋದ್ಯಮ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಮಂಡನೆ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದಾರೆ.

ಅದರಂತೆ ಬೋಧಗಯಾದಲ್ಲಿನ ಮಹಾಬೋಧಿ ದೇವಾಲಯದ ಕಾರಿಡಾರ್ ಪ್ರಸಿದ್ಧವಾದ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್‌ನ ರೀತಿಯಲ್ಲಿ ರೂಪಾಂತರವನ್ನು ಪಡೆಯಲಿದೆ. ಗಯಾದಲ್ಲಿರುವ ವಿಷ್ಣುಪಾದ ದೇವಾಲಯ ಮತ್ತು ಬೋಧಗಯಾದ ಮಹಾಬೋಧಿ ದೇವಾಲಯವನ್ನು ವಿಶ್ವ ದರ್ಜೆಯ ಪಾರಂಪರಿಕ ತಾಣಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಆ ಮೂಲಕ ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರವಾಸಿಗರಿಗೆ ಅವರ ಆಕರ್ಷಣೆಯನ್ನು ಹೆಚ್ಚಿಸುವಂತೆ ಮಾಡಲಾಗುವುದು ಎಂದರು.

ಪ್ರವಾಸೋದ್ಯಮ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ:

ನಳಂದ ವಿಶ್ವವಿದ್ಯಾನಿಲಯವನ್ನು ಪುನರುಜ್ಜೀವನಗೊಳಿಸುವುದರ ಜೊತೆಗೆ ನಳಂದವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಪ್ರಾಶಸ್ತ್ಯ ನೀಡಿದ್ದು ಅದರಂತೆ ಭಾರತವನ್ನು ಜಾಗತಿಕ ಪ್ರವಾಸಿ ತಾಣವಾಗಿಸುವ ಪ್ರಯತ್ನಗಳು ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular